ಭೃಂಗದ ಬೆನ್ನೇರಿ ಬಂತು

ಭೃಂಗದ ಬೆನ್ನೇರಿ ಬಂತು ಕಲ್ಪನಾವಿಲಾಸ
ಮಸೆದ ಗಾಳಿ ಪಡೆಯುತಿತ್ತು ಸಹಜ ಪ್ರಾಸಾ
ಮಿಂಚಿ ಮಾಯವಾಗುತಿತ್ತು ಒಂದು ಮಂದಹಾಸಾ ||
ಏನು ಏನು? ಜೇನು ಜೇನು? ಏನೆ ಗುಂಗುಂ ನಾನಾ
ಓಂಕಾರದ ಶಂಖನಾದಕ್ಕಿಂತ ಕಿಂಚಿದೂ ನಾ
ಕವಿಯ ಏಕತಾನ ಕವನದಂತೆ ನಾದಲೀನಾ ||
ಒಡಲ ನೂಲಿನಿಂದ ನೇಯುವಂತೆ ಜೇಡ ಜಾಲಾ
ತನ್ನ ದೈವ ರೇಷ್ಮೆ ಬರೆಯುವಂತೆ ತಾನೆ ಬಾಲಾ
ಉಸಿರಿನಿಂದೆ ಹುಡುಕುವಂತೆ ತನ್ನ ಬಾಳ ಮೇಲಾ ||
ತಿರುಗುತಿತ್ತು ತನ್ನ ಸುತ್ತು ಮೂಕಭಾವ ಯಂತ್ರಾ
ಗರ್ಭಗುಡಿಯ ಗರ್ಭದಲ್ಲಿ ಪಡಿನುಡಿಯುವ ಮಂತ್ರಾ
ಮೂಡಿ ಮೂಡಿ ಮುಳುಗಿ ಮೊಳಗು ವೋಲು ಸ್ವತಂತ್ರಾ |
ಎಲ್ಲೆಲ್ಲೂ ಸೃಷ್ಟಿದೇವಿಗಿಟ್ಟ ಧೂಪ ಧೂಮಾ
ಲಹರಿ ಲಹರಿ ಕಂಪಬಳ್ಳಿ; ಚಿತ್ತರಂಗ ಭೂಮಾ
ದಾಂಗುಡಿಗಳ ಬಿಡುತ್ತಲಿತ್ತು ಅರಳಲಿತ್ತು, ಪ್ರೇಮಾ ||
ಅಂತು ಇಂತು ಪ್ರಾನ ತಂತು ಹೆಣೆಯುತಿತ್ತು ಬಾಳಾ
ಅಲ್ಲು ಇಲ್ಲು ಚೆಲುವು ನಿಂತು ಹಾಕುತಿತ್ತು ತಾಳಾ
ಬಂತೆಲ್ಲಿಗೆ? ಕೇಳುತ್ತಿದ್ದ ನೀಯನಂತ ಕಾಳಾ ||
ಮಾತು ಮಾತು ಮಧಿಸಿ ಬಂದ ನಾದದ ನವನೀತಾ
ಹೆಗ್ಗ ಬೀರಿ ಬಗ್ಗಲಿತ್ತು ತನ್ನ ತಾನೇ ಪ್ರೀತಾ
ಅರ್ಥವಿಲ್ಲ ಸ್ವಾರ್ಥವಿಲ್ಲ ಬರಿಯ ಭಾವಗೀತಾ ||
ಭೃಂಗದ ಬೆನ್ನೇರಿ ಬಂತು ಕಲ್ಪನಾವಿಲಾಸಾ
ಮಸೆದ ಗಾಳಿ ಪಕ್ಕ ಪಡೆಯುತ್ತಿತ್ತು ಸಹಜ ಪ್ರಾಸಾ
ಮಿಂಚಿ ಮಾಯವಾಗುತಿತ್ತು ಒಂದು ಮಂದಹಾಸ ||
ಪರಿಕರಗಳು
ಸಾಲದ ಮಾಸಿಕ ಕಂತು (EMI)
ಸಾಲದ ಮಾಸಿಕ ಕಂತು (EMI) ಎಂದರೆ ಹಣಕಾಸು ಸಂಸ್ಥೆಯೊಂದರಿಂದ ಸಾಲ ತೆಗೆದುಕೊಂಡಾಗ, ಪ್ರತಿ ಮಾಸ ಅಥವಾ ಪ್ರತಿಕಾಲದಲ್ಲಿ ಪಾವತಿಸಬೇಕಾದ ನಿಗದಿತ ಮೊತ್ತ. ಮಾಸಿಕ ಕಂತನ್ನು ಆನ್‌ಲೈನ್‌ನಲ್ಲಿ ಲೆಕ್ಕಾಚಾರ ಮಾಡಿ.
ಹೆಸರು ಹುಡುಕಿ
ಲಿಂಗ, ಪ್ರಕಾರ, ವರ್ಗ, ಜನಪ್ರಿಯತೆಯ ಆಧಾರದ ಮೇಲೆ ಹೆಸರುಗಳನ್ನು ಹುಡುಕಿ. ಸಮಾನಾರ್ಥಕ ಹೆಸರುಗಳನ್ನು ಹುಡುಕಿ.
ಕರ್ನಾಟಕ ರಾಜ್ಯ
ಕರ್ನಾಟಕದ ಈ ನಕ್ಷೆಯಲ್ಲಿ ನೀವು ಪ್ರತಿ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ, ಆ ಜಿಲ್ಲೆಯ ವಿವರಗಳು – ಹವಾಮಾನ, ಜನಸಂಖ್ಯೆ, ಪ್ರಮುಖ ನಗರಗಳು, ಆರ್ಥಿಕ ಚಟುವಟಿಕೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಪುಟದ ಕೆಳಭಾಗದಲ್ಲಿ ಅಥವಾ ಬಲ ಭಾಗದಲ್ಲಿ ನೋಡಬಹುದಾಗಿದೆ. ಪುಟವನ್ನು ಅನ್ವೇಷಿಸಿ ಮತ್ತು ಕರ್ನಾಟಕದ ಬಗ್ಗೆ ಹೆಚ್ಚು ತಿಳಿದುಕೊಳ್ಳಿ!